|
| ಅಫ್ಜಲ್‌ಗೆ ಗಲ್ಲುಶಿಕ್ಷೆ: ದೇಶಪಾಂಡೆ ಆಗ್ರಹ |
| ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008 ( 18:03 IST ) | |
ಸಂಸತ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಪ್ರಮುಖ ಆರೋಪಿ ಅಫ್ಜಲ್ ಗುರುವಿಗೆ ಜಾರಿಗೊಳಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ನಾಯಕರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಫ್ಜಲ್ ಗುರು ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ, ಈತನಿಗೆ ಸುಪ್ರಿಂಕೋರ್ಟ್ ನೇಣು ಶಿಕ್ಷೆ ವಿಧಿಸಿ ಮೂರು ವರ್ಷ ಕಳೆದಿದೆ. ಈ ಕುರಿತು ಕೇಂದ್ರ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೆ, ಭಯೋತ್ಪಾದನಾ ಚಟುವಟಿಕೆ ತಡೆಯಲು ರಾಜ್ಯ ಸರ್ಕಾರ ಕೈಗೊಳ್ಳುವ ಎಲ್ಲಾ ಕ್ರಮಗಳಿಗೂ ಕಾಂಗ್ರೆಸ್ ಪಕ್ಷ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.
ಭಯೋತ್ಪಾದನೆ ದಾಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿರೋಧ ಪಕ್ಷಗಳ ಸಲಹೆ ಕೋರಿ ಸಭೆ ಕರೆದಿದೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಮುಂಬೈನಲ್ಲಿ ನಡೆದಿರುವ ಘಟನೆ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯ ಸರ್ಕಾರ ತುರ್ತು ಅಧಿವೇಶನ ಕರೆದು ಚರ್ಚೆ ನಡೆಸಬೇಕೆಂದು ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಅವರು ಸಲಹೆ ಮಾಡಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|