|
| ಉಗ್ರರ ದಾಳಿ ಎದುರಿಸಲು ರಾಜ್ಯ ಸಿದ್ಧ |
| ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008 ( 18:34 IST ) | |
ಇಡೀ ದೇಶವನ್ನೇ ಕಂಗೆಡಿಸಿರುವ ಮುಂಬೈ ಮೇಲಿನ ಉಗ್ರರ ದಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಿದ್ದು, ರಾಷ್ಟ್ರೀಯ ಭದ್ರತಾ ಪಡೆ ಮಾದರಿಯ ಕಮಾಂಡೋಗಳ ನಾಲ್ಕು ತುಕಡಿಯನ್ನು ರಾಜ್ಯಕ್ಕೆ ಕಳುಹಿಸಿದೆ.
ತರಬೇತಿ ಪಡೆದ ಕೆಎಸ್ಆರ್ ಪಿ ಸಿಬ್ಬಂದಿಗಳನ್ನು ಒಳಗೊಂಡ ಈ ಕಮಾಂಡೋ ಪಡೆ ಎನ್ಎಸ್ ಜಿ ಮಾದರಿಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಇನ್ನಿತರ ಸವಲತ್ತುಗಳನ್ನು ಹೊಂದಿರುತ್ತದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಶ್ರೀ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಇಂದು 125 ಮಂದಿಯಿರುವ ನಾಲ್ಕು ತುಕಡಿಗಳ ಕಾಮಾಂಡೋಗಳಿಗೆ ನೀಡಲಾಗಿರುವ ಸವಲತ್ತುಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂಬೈಗೆ ದಾಳಿ ನಡೆಸಲು ಉಗ್ರರು ಸಮುದ್ರ ಮಾರ್ಗವಾಗಿ ಬಂದಿದ್ದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶವನ್ನು ಹೈ ಅಲರ್ಟ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.
ದಾಳಿ ಬಳಿಕ ಕರಾವಳಿಯಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲಾಗಿದ್ದು, ಅತ್ಯಾಧುನಿಕ ಬೋಟ್ ಗಳು, ಶಸ್ತ್ರಾಸ್ತ್ರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|