|
| ಉಗ್ರರ ವಿರುದ್ಧ ಒಗ್ಗಟ್ಟಾಗಿ ಹೋರಾಟ: ಸರ್ವಪಕ್ಷಗಳ ನಿರ್ಣಯ |
| ಬೆಂಗಳೂರು, ಮಂಗಳವಾರ, 2 ಡಿಸೆಂಬರ್ 2008 ( 13:29 IST ) | |
ಮುಂಬೈ ದಾಳಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ಭಯೋತ್ಪಾದನೆ ದಮನ ವಿಷಯದಲ್ಲಿ ರಾಜಕೀಯ ಬೇಡ. ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋರಾಡೋಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ ವಿರೋಧ ಪಕ್ಷದ ಮುಖಂಡರು, ಶಾಸಕರು ಹಲವು ವಿಚಾರಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಭಯೋತ್ಪಾದನೆ ಹತ್ತಿಕ್ಕಲು ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪ್ರತಿಪಕ್ಷಗಳ ನಾಯಕರು ತಿಳಿಸಿದರು.
ಅಲ್ಲದೆ, ರಾಜ್ಯಕ್ಕೆ ಹೆಚ್ಚಿನ ಭದ್ರತಾ ಪಡೆಗಳ ರವಾನಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ನಿಯೋಗ ತೆರಳುವ ಪ್ರಸ್ತಾಪ ಮುಂದಿಟ್ಟಿದ್ದು ಮಾತ್ರ ವಿಶೇಷ. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಶೀಘ್ರವೇ ಸರ್ವ ಪಕ್ಷಗಳ ನಿಯೋಗ ಒಯ್ಯುವ ಭರವಸೆ ನೀಡಿದರು.
ತುಟಿ ಬಿಚ್ಚದ ಮಾಜಿ ಸಿಎಂ ಭಯೋತ್ಪಾದನೆ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಗಂಭೀರ ಚರ್ಚೆ ನಡೆಸುತ್ತಿದ್ದರೂ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾತ್ರ ತುಟಿ ಬಿಚ್ಚಲಿಲ್ಲ.
ಹಲವು ಸಾರಿ ಮುಖ್ಯಮಂತ್ರಿ ಹಾಗೂ ಹಳೇ ದೋಸ್ತಿ ಬಿ.ಎಸ್. ಯಡಿಯೂರಪ್ಪನವರು ಭದ್ರತಾ ಕ್ರಮಗಳ ಬಗ್ಗೆ ಸಲಹೆ ನೀಡುವಂತೆ ಮನವಿ ಮಾಡಿದರೂ ಪ್ರತಿಕ್ರಿಯಿಸಿಲ್ಲ. ಈ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಎಂ.ಸಿ. ನಾಣಯ್ಯ ಮಾತನಾಡಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|