|
| ಹುತಾತ್ಮರಿಗೆ ಹೋಟೆಲುಗಳ ಸಂಘ ಶ್ರದ್ದಾಂಜಲಿ |
| ಬೆಂಗಳೂರು, ಮಂಗಳವಾರ, 2 ಡಿಸೆಂಬರ್ 2008 ( 13:29 IST ) | |
ಮುಂಬೈಯಲ್ಲಿ ಉಗ್ರರ ದಾಳಿಗೆ ತುತ್ತಾದ ಹೋಟೆಲ್ ಸಿಬ್ಬಂದಿ, ಗ್ರಾಹಕರು ಹಾಗೂ ದೇಶಕ್ಕಾಗಿ ಪ್ರಾಣ ಕಳೆದುಕೊಂಡ ವೀರಯೋಧರಿಗೆ ಹೋಟೆಲುಗಳ ಸಂಘ ಸೋಮವಾರ ಸಂಜೆ 6 ಗಂಟೆಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಅರ್ಪಿಸಿದೆ.
ನಗರದ ಎಲ್ಲ ಹೋಟೆಲುಗಳು ಏಕಕಾಲದಲ್ಲಿ ಶ್ರದ್ದಾಂಜಲಿ ಅರ್ಪಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಎನ್. ವಾಸುದೇವ ಅಡಿಗ, ನಾವು ಮಾಡಬಹುದಾದ ಕನಿಷ್ಠ ಕಾರ್ಯವೆಂದರೆ ತಮ್ಮ ಜೀವದ ಹಂಗು ತೊರೆದು ಉಗ್ರರ ವಿರುದ್ಧ ಹೋರಾಡಿದ ಯೋಧರಿಗೆ ನಮನ ಸಲ್ಲಿಸುವುದು ಎಂದರು.
ಉಗ್ರರ ದಾಳಿಯ ಹಿನ್ನೆಲೆಯಲ್ಲಿ ನಗರದ ಎಲ್ಲಾ ಹೋಟೆಲುಗಳು ಬಿಗಿ ಭದ್ರತೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಹೋಟೆಲು ಸಂಘ ಮನವಿ ಮಾಡಿದೆ.
ಈ ನಿಟ್ಟಿನಲ್ಲಿ ಹೊಟೇಲ್‌ಗಳಿಗೆ ಬರುವ ವಾಹನ ಹಾಗೂ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸುವ ಅಗತ್ಯವಿದ್ದು, ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲುಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|