|
| ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು |
| ಬೆಂಗಳೂರು, ಬುಧವಾರ, 3 ಡಿಸೆಂಬರ್ 2008 ( 13:53 IST ) | |
ರಾಜ್ಯದ ಎಂಟು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ತೀರ್ಮಾನಿಸಿದೆ.ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಿಪಿಎಂ ನಾಯಕ ವಿ.ಜೆ.ಕೆ. ನಾಯರ್, ಮಾಜಿ ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಒಟ್ಟಾಗಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ಸಿಪಿಎಂ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಬದಲಾಗಿ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡಿ ಗೆಲ್ಲಿಸುವಂತೆ ಮನವಿ ಮಾಡಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತು ಎಡಪಕ್ಷಗಳು ಒಟ್ಟಾಗಿ ಹೋರಾಟ ರೂಪಿಸಲಿದ್ದು, ಈ ಮೂಲಕ ರಾಜ್ಯಕ್ಕೆ ಒಂದು ಒಳ್ಳೆಯ ಸಂದೇಶವನ್ನು ರವಾನಿಸುತ್ತದೆ ಎಂದು ತಿಳಿಸಿದ್ದಾರೆ.
ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ನಡೆಸಬೇಕಾದ ಅಗತ್ಯವಿದೆ. ಅಲ್ಲದೆ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಭಯೋತ್ಪಾದನೆ ಹತೋಟಿ ಮಾಡುವಲ್ಲಿ ವಿಫಲತೆ ರೈತರ ಆತ್ಮಹತ್ಯೆ ಹೆಚ್ಚಳ ಮೊದಲಾದವುಗಳು ಚುನಾವಣೆಯಲ್ಲಿನ ಪ್ರಮುಖ ಅಸ್ತ್ರಗಳಾಗುತ್ತವೆ ಎಂದು ಅವರು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|