|
| ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್ |
| ಬೆಂಗಳೂರು, ಬುಧವಾರ, 3 ಡಿಸೆಂಬರ್ 2008 ( 18:36 IST ) | |
ದೇಶದ ಪ್ರತಿಭಾ ಪಲಾಯನವಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಬೇಕಾದ ಅಗತ್ಯವಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.
ನಗರದ ಇಂದು(ಬುಧವಾರ) ನಡೆದ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಶತಮಾನೋತ್ಸವದ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಾಗಲೇ ವಿದೇಶಕ್ಕೆ ಹೋಗಿ ನೆಲೆಸಿರುವ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಭಾರತದ ಪ್ರತಿಭೆಗಳನ್ನು ಹಿಂದಕ್ಕೆ ಕರೆಸಬೇಕಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಜೆಟ್ ಕುರಿತು ಮಾತನಾಡಿದ ಪ್ರಧಾನಿಗಳು, ಮುಂದಿನ ಬಜೆಟ್ ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಈ ಮೂಲಕ ಈ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಅಲ್ಲದೆ, ವಿಜ್ಞಾನ ತಂತ್ರಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ಇದು ದೇಶಕ್ಕೂ ಸಹಾಯಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|