ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿಧಾನಸಭಾ ಉಪಚುನಾವಣೆ: ಹೈಕಮಾಂಡ್ ಬುಲಾವ್
ಬೆಂಗಳೂರು, ಬುಧವಾರ, 3 ಡಿಸೆಂಬರ್ 2008   ( 18:37 IST )
ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಗೊಂಡಿದ್ದರೂ, ಕಾಂಗ್ರೆಸ್ ಮಾತ್ರ ಇನ್ನೂ ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಳಿಸಿಲ್ಲ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ಎಂಟು ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿ ಈಗಾಗಲೇ ಹೈಕಮಾಂಡ್‌ಗೆ ರವಾನಿಸಿದೆ.

ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ಇದೇ ವೇಳೆ ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಹೈಕಮಾಂಡ್ ಜೊತೆಯಲ್ಲಿ ರಾಜ್ಯ ನಾಯಕರು ಚರ್ಚೆ ನಡೆಸಲಿದ್ದಾರೆ. ದೆಹಲಿಯಿಂದ ಹಿಂತಿರುಗಿದ ಬಳಿಕ ಅಂತಿಮ ಪಟ್ಟಿ ಪ್ರಕಟಗೊಳಿಸುವ ಸಾಧ್ಯತೆಗಳಿವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ನಾಡಗೀತೆಗೆ ಅಗೌರವ: ಸಿಎಂ ಕ್ಷಮೆಯಾಚನೆ
ವಿದೇಶಿಯರ ಮಾಹಿತಿ ಸಂಗ್ರಹಕ್ಕೆ ಸಿಎಂ ಸೂಚನೆ
ಉನ್ನಿಕೃಷ್ಣನ್ ವರ್ತನೆ ಹಿಂದೆ ರಾಜಕೀಯ ವಾಸನೆ: ಸಿಪಿಎಂ
ಆಸ್ತಮಾ ಬಾಧೆ: ಟೆಕಿ ಆತ್ಮಹತ್ಯೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...