ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು, ಬುಧವಾರ, 3 ಡಿಸೆಂಬರ್ 2008   ( 18:42 IST )
ಮುಂಬೈನಲ್ಲಿ ಭಯೋತ್ಪಾದಕರ ಧಾಳಿ ಹಿನ್ನೆಲೆಯಲ್ಲಿ ರಾಜ್ಯದ ರಕ್ಷಣಾ ಕ್ರಮಗಳಿಗೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಎನ್‌ಎಸ್‌ಜಿ ಘಟಕವನ್ನು ನಗರದಲ್ಲಿ ಸ್ಥಾಪಿಸಬೇಕೆಂದು ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ವಿವಿಧ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ವಿವಿಧ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿಗಳು ಸಲ್ಲಿಸಿದ್ದಾರೆ.

ನಗರದಲ್ಲಿ ಪ್ರಸಿದ್ಧ ಬಹುರಾಷ್ಟ್ರೀಯ ಕಂಪೆನಿಗಳು ಹಾಗೂ ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು, ಸಾರ್ವಜನಿಕ ವಲಯದ ಉದ್ದಿಮೆಗಳು, ವಿಜ್ಞಾನ ತಂತ್ರಜ್ಞಾನ ಸಂಸ್ಥೆಗಳಿದ್ದು, ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ರಾಜ್ಯಕ್ಕೆ ಮೂರು ಇಂಡಿಯನ್ ರಿಜರ್ವ್ ಬೆಟಾಲಿಯನ್ ಮಂಜೂರು ಮಾಡಬೇಕು. ಹಾಗೆಯೇ, ತುರ್ತು ಕಾರ್ಯಾಚರಣೆಗಳಿಗಾಗಿ ಹಗಲು-ರಾತ್ರಿ ಕಾರ್ಯ ನಿರ್ವಹಿಸುವ ಸಾಮರ್ಥ್ಯವುಳ್ಳ ಎರಡು ಹೆಲಿಕಾಪ್ಟರ್ ರಾಜ್ಯದ ಬಳಕೆಗಾಗಿ ಮೀಸಲಿಡಬೇಕು ಎಂದು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಧಾನಸಭಾ ಉಪಚುನಾವಣೆ: ಹೈಕಮಾಂಡ್ ಬುಲಾವ್
ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ನಾಡಗೀತೆಗೆ ಅಗೌರವ: ಸಿಎಂ ಕ್ಷಮೆಯಾಚನೆ
ವಿದೇಶಿಯರ ಮಾಹಿತಿ ಸಂಗ್ರಹಕ್ಕೆ ಸಿಎಂ ಸೂಚನೆ
ಉನ್ನಿಕೃಷ್ಣನ್ ವರ್ತನೆ ಹಿಂದೆ ರಾಜಕೀಯ ವಾಸನೆ: ಸಿಪಿಎಂ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...