ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಡಿ. 4ರಿಂದ ಬೆಂಗಳೂರು ಹಬ್ಬ
ಬೆಂಗಳೂರು, ಬುಧವಾರ, 3 ಡಿಸೆಂಬರ್ 2008   ( 19:03 IST )
ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ವೇದಿಕೆಯಾಗಿರುವ ಬೆಂಗಳೂರು ಹಬ್ಬಕ್ಕೆ ಇದೇ ತಿಂಗಳು 4ರಂದು ಪ್ರಾರಂಭಗೊಳ್ಳಲಿದೆ.ಈ ಕುರಿತು ಸಮಗ್ರ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್, ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ಈ ಹಬ್ಬವನ್ನು ಆಚರಿಸುತ್ತಿದ್ದು, 4ರಿಂದ 21ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಈ ಹಬ್ಬದಿಂದ ದೇಸೀಯ ಪ್ರತಿಭೆಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಜಾನಪದ, ಸಾಂಪ್ರದಾಯಿಕ ಕರಕುಶಲ, ಈಜು, ಗಾಲ್ಫ್, ಬ್ಯಾಡ್ ಮಿಂಟನ್ ಪಂದ್ಯಾವಳಿಗಳು, ಬೀದಿ ಜಾತ್ರೆ, ಮಕ್ಕಳ ಮೇಳ, ಸಂಗೀತ ಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಹಬ್ಬಕ್ಕೆ ಸುಮಾರು ನಾಲ್ಕು ಕೋಟಿ ರೂ. ವೆಚ್ಚ ಒದಗಿಸಲಾಗಿದ್ದು, ಬಿಬಿಎಂಪಿ ಒಂದು ಕೋಟಿ, ಬಿಡಿಎ 50ಲಕ್ಷ ರೂ. ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಎರಡೂವರೆ ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲರಿಗಾಗಿ ಸ್ವಲ್ಪ ವಿಶೇಷದಿಂದ ನಡೆಸುವುದು ಸರ್ಕಾರದ ಉದ್ದೇಶವಾಗಿದ್ದು, ನಗರದಲ್ಲಿ ಪ್ರತಿ ಬಡಾವಣೆಯಲ್ಲೂ ಹಬ್ಬಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ಚಟುವಟಿಕೆ ಆಯೋಜಿಸಲಾಗುತ್ತದೆ ಎಂದು ಅವರು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ವಿಧಾನಸಭಾ ಉಪಚುನಾವಣೆ: ಹೈಕಮಾಂಡ್ ಬುಲಾವ್
ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ನಾಡಗೀತೆಗೆ ಅಗೌರವ: ಸಿಎಂ ಕ್ಷಮೆಯಾಚನೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...