|
| ಬೆಂಗಳೂರು ಹಬ್ಬಕ್ಕೆ ಕರವೇ ವಿರೋಧ |
| ಬೆಂಗಳೂರು, ಗುರುವಾರ, 4 ಡಿಸೆಂಬರ್ 2008 ( 16:35 IST ) | |
ಬೆಂಗಳೂರು ಹಬ್ಬವನ್ನು ರಾಜಧಾನಿಯಲ್ಲಿ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದ್ದರಿಂದ ಬೆಂಗಳೂರು ಹಬ್ಬಕ್ಕೆ ಕಾರ್ಮೋಡ ಕವಿದಂತಾಗಿದೆ.
ಬೆಂಗಳೂರು ಹಬ್ಬಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ಎರಡೂವರೆ ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಹಿಂದೆ ಪಡೆಯುವವರೆಗೆ ಹೋರಾಟ ಮುಂದುವರಿಯುತ್ತದೆ. ಕನ್ನಡೇತರ ಕಾರ್ಯಕ್ರಮಗಳಿಗೆ ಕೋಟ್ಯಂತರ ರೂ. ಅನುದಾನ ಘೋಷಣೆ ಮಾಡಿರುವುದು ಸರಿಯಲ್ಲ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದ್ದಾರೆ.
ಬೆಂಗಳೂರು ಹಬ್ಬ ಕಳೆದ ಐದಾರು ವರ್ಷಗಳಿಂದ ಖಾಸಗಿ ಪ್ರಾಯೋಜಕತ್ವದಲ್ಲಿ ನಡೆಯುತ್ತಿದ್ದು, ಖಾಸಗಿ ಸಂಸ್ಥೆಗಳಿಗೆ ಮಾರುಕಟ್ಟೆ ಒದಗಿಸುತ್ತಿದೆ ಎಂದು ನಾರಾಯಣ ಗೌಡ ಆರೋಪಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ಕನ್ನಡ ಸಂಸ್ಥೆಗಳಿಗೆ ಬಿಬಿಎಂಪಿ ಕೊಡುತ್ತಿದ್ದ 10 ಸಾವಿರ ರೂ. ಹಣವನ್ನು ನಿಲ್ಲಿಸಲಾಗಿದೆ.
ರಾಜ್ಯದಲ್ಲಿ ಸಾವಿರಾರು ಮಂದಿ ರೈತರು ಸಾವಿಗೆ ಶರಣಾದಾಗ ಪರಿಹಾರ ನೀಡಲು ಸಮಿತಿ ರಚನೆ ಮಾಡಲಾಗುತ್ತದೆ. ಪುಸ್ತಕ ಬಿಡುಗಡೆಗೆ ಅನುದಾನ ಕೇಳಿದರೆ ಇಲ್ಲ ಎನ್ನುತ್ತಾರೆ. ಕನ್ನಡ, ಜಾನಪದ ಕಾರ್ಯಕ್ರಮಗಳಿಗೆ ಸೂಕ್ತ ವೇದಿಕೆ ಕಲ್ಪಿಸುತ್ತಿಲ್ಲ. ಆದರೆ ಬೆಂಗಳೂರು ಹಬ್ಬಕ್ಕೆ ಎರಡೂವರೆ ಕೋಟಿ ರೂ. ಅನುದಾನ ನೀಡಿರುವುದು ಖಂಡನೀಯ ಎಂದರು.
ಈ ಮಧ್ಯೆ ಬೆಂಗಳೂರು ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೇ ನಡೆಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ಕತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|