ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿಧಾನಪರಿಷತ್‌ಗೆ ಮಧು, ಕೈಲಾಶ್ ಅವಿರೋಧ ಆಯ್ಕೆ
ಬೆಂಗಳೂರು, ಗುರುವಾರ, 4 ಡಿಸೆಂಬರ್ 2008   ( 16:37 IST )
ವಿಧಾನಪರಿಷತ್ತಿಗೆ ಬಿಜೆಪಿಯ ಮಧುಮಾದೇಗೌಡ ಹಾಗೂ ಕೈಲಾಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಅರವಿಂದ ಲಿಂಬಾವಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇವರಿಬ್ಬರು ಆಯ್ಕೆಗೊಂಡಿದ್ದಾರೆ. ಚುನಾವಣಾ ಆಯೋಗವು ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದರ ಪರಿಣಾಮವಾಗಿ ಅತಿ ಹೆಚ್ಚು ಸಂಖ್ಯಾಬಲ ಹೊಂದಿರುವ ಬಿಜೆಪಿಯೇ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲದ ಕಾರಣ ಎರಡೂ ಪಕ್ಷಗಳು ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ನಿಟ್ಟಿನಲ್ಲಿ ಬಿಜೆಪಿಯ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯಲು ಬುಧವಾರ ಕೊನೆ ದಿನವಾಗಿದ್ದರಿಂದ ಕಣದಲ್ಲಿರುವ ಇಬ್ಬರೂ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಮಾದೇಗೌಡ ಸೋಲುಂಡಿದ್ದರು. ಈ ಬಾರಿಯ ಉಪಚುನಾವಣೆಯ ಕಣದಿಂದ ಹಿಂದೆ ಸರಿದ ಮಧು ಮಾದೇಗೌಡ ಷರತ್ತಿನ ಮೇಲೆ ವಿಧಾನಪರಿಷತ್ತಿಗೆ ಆಯ್ಕೆ ಮಾಡಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೆಂಗಳೂರು ಹಬ್ಬಕ್ಕೆ ಕರವೇ ವಿರೋಧ
ಅದೊಂದು ಮುಗಿದ ಅಧ್ಯಾಯ: ಸಂದೀಪ್ ಕುಟುಂಬ
ಕಸಬ್‌ಗೆ ಮಹ್ಮದ್ ಗೌಸ್ ಸಹಪಾಠಿ
ಡಿ. 4ರಿಂದ ಬೆಂಗಳೂರು ಹಬ್ಬ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ರಾಜ್ಯದ ಎಂಟು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ತೀರ್ಮಾನಿಸಿದೆ.
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...