ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಬೆಂಗಳೂರು, 2 ಜನವರಿ 2009   ( 19:16 IST )
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನತ್ತ ಬೊಟ್ಟು ಮಾಡಿದ್ದು, ತಪ್ಪು ಮಾಡಿದವರು ತಿದ್ದಿಕೊಳ್ಳಬೇಕು, ಇಲ್ಲದಿದ್ದರೆ ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ, ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಗೈರು ಹಾಜರಾಗಿರುವ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸದೆ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ನೂತನ ಪಕ್ಷ ಕಟ್ಟುತ್ತಾರೆಂಬ ಊಹಾಪೋಹಗಳ ಕುರಿತು ಪ್ರಶ್ನಿಸಿದಾಗ, ಆ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ಹೇಳಿದರು.

ಜವಾಬ್ದಾರಿ ವಹಿಸಿದ ಮೇಲೆ ಅವರು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕಿತ್ತು. ಒಂದು ವೇಳೆ ಅವರು ಮತ್ತೂ ಅಸಮಾಧಾನಗೊಂಡಿದ್ದರೆ ನಾವೇನೂ ಮಾಡುವ ಹಾಗಿಲ್ಲ. ಅವರು ಕಾಂಗ್ರೆಸ್‌‌ನಲ್ಲಿ ಇರುವುದು, ಬಿಡುವುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜ.5ರ ಬಳಿಕ 'ಮೌನ‌‌'‌‌ ಮುರಿದು ಉತ್ತರಿಸುವೆ: ಸಿದ್ದರಾಮಯ್ಯ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಮರು ಅಧಿಸೂಚನೆಗೆ ಒತ್ತಾಯ
ಮಹಾತ್ಮಾ ಗಾಂಧಿ ಪ್ರತಿಮೆಗೆ ಅವಮಾನ
ಶಂಕಿತ ಉಗ್ರರು ವಿಚಾರಣೆಗಾಗಿ ಗುಜರಾತಿಗೆ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...