|
| ಕಾಂಗ್ರೆಸ್ ಸಭೆಗೆ 'ಕೈ' ಕೊಟ್ಟ ಸಿದ್ದರಾಮಯ್ಯ |
| 5 ಜನವರಿ 2009 ( 19:14 IST ) | |
ಉಪಚುನಾವಣೆಯಲ್ಲಿ ಸೋಲಿನ ರುಚಿಕಂಡು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋಮವಾರ ಕರೆದಿರುವ ಆತ್ಮಾವಲೋಕನ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿತ್ತು.
ಆ ನಿಟ್ಟಿನಲ್ಲಿ ಸೋಲಿಗೆ ಕಾರಣಗಳನ್ನು ಪತ್ತೆ ಹಚ್ಚಲು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸೋಮವಾರ ಆತ್ಮಾವಲೋಕನ ಸಭೆ ಕರೆದಿದೆ.
ಇಂದು ಕರೆದಿರುವ ಸಭೆಗೆ ತಾನು ಆಗಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರಿಗೆ ದೂರವಾಣಿ ಮೂಲಕ ತಿಳಿಸಿರುವುದಾಗಿ ಸಿದ್ದರಾಮಯ್ಯ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಆ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಹೊಸ ಪಕ್ಷ ಕಟ್ಟುವುದು ಬಹುತೇಕ ಖಚಿತವಾದಂತಾಗಿದ್ದು, ಜನವರಿ 8ರ ಬಳಿಕ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ, ಹೊಸ ಪಕ್ಷದ ಗುಟ್ಟನ್ನು ಬಯಲು ಮಾಡಲಿದ್ದಾರೆಂದು ಸಿದ್ದರಾಮಯ್ಯ ಅವರ ಆಪ್ತವಲಯ ಹೇಳಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|