|
| ಕಾಂಗ್ರೆಸ್ ಸಭೆಗೆ ಧರಂ, ಖರ್ಗೆ, ಪ್ರಕಾಶ್ ಗೈರು |
| ಬೆಂಗಳೂರು, 5 ಜನವರಿ 2009 ( 19:25 IST ) | |
ರಾಜ್ಯದ ಎಂಟು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸೋಲನ್ನನುಭವಿಸಿರುವ ಬಗ್ಗೆ ಕಾಂಗ್ರೆಸ್ ಸೋಮವಾರ ಸಂಜೆ ಕರೆದಿರುವ ಆತ್ಮಾವಲೋಕನ ಸಭೆಗೆ ಪಕ್ಷದ ನಾಯಕರಾದ ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ, ಎಂ.ಪಿ.ಪ್ರಕಾಶ್ ಹಾಗೂ ಸಿದ್ದರಾಮಯ್ಯ ಗೈರುಹಾಜರಾಗಿದ್ದಾರೆ.
ಇತ್ತೀಚೆಗೆ ಎಂಟು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುನ್ನುಣ್ಣುವ ಮೂಲಕ ಭಾರೀ ಮುಖಭಂಗ ಅನುಭವಿಸಿತ್ತು. ಆ ಹಿನ್ನೆಲೆಯಲ್ಲಿ ಸೋಲಿನ ಕುರಿತು ಪರಾಮರ್ಶೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆದಿತ್ತು.
ಕಾಂಗ್ರೆಸ್ ಆತ್ಮಾವಲೋಕನ ಸಭೆಗೆ ತಾವು ಹೋಗಲ್ಲ ಅಂತ ಸಿದ್ದರಾಮಯ್ಯ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಪಕ್ಷದ ನಾಯಕರಾದ ಎಂ.ಪಿ.ಪ್ರಕಾಶ್ ಕೂಡ ಗೈರುಹಾಜರಾಗಿರುವುದು ಒಂದೆಡೆ ಕುತೂಹಲಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ಪಕ್ಷದೊಳಗಿನ ಅಸಮಾಧಾನ ಸ್ಫೋಟಗೊಂಡಂತಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|