ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಎನ್ಎಸ್ ಜಿ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಒತ್ತಾಯ
ನವದೆಹಲಿ, 5 ಜನವರಿ 2009   ( 19:52 IST )
ತಾಂತ್ರಿಕ ಮತ್ತು ವೈಜ್ಞಾನಿಕವಾಗಿ ಬೆಂಗಳೂರು ಮುಂದುವರಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಸಹ ಎನ್‌ಎಸ್‌ಜಿ ಘಟಕ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

ಜ 6 ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಯಡಿಯ‌ೂರಪ್ಪ ದೇಶದ ಐಟಿ ಕಂಪೆನಿಗಳ ನೆಲೆಯಾದ ಬೆಂಗಳೂರಿಗೆ ಸೂಕ್ತ ರಕ್ಷಣೆ ಅಗತ್ಯವಾಗಿ ಬೇಕಾಗಿದೆ ಎಂದು ಹೇಳಿದರು. ಮುಂಬೈ, ಚೆನ್ನೈ, ಹೈದರಾಬಾದ್ ಹಾಗೂ ಕೊಲ್ಕತ್ತಾದಲ್ಲಿ ಎನ್ಎಸ್‌ಜಿ ಸ್ಥಾಪಿಸಿ ಬೆಂಗಳೂರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಅವರು ಅತೀವ ಬೇಸರ ವ್ಯಕ್ತಪಡಿಸಿದರು. ಇದರ ಜೊತೆಗೆ ಬೆಂಗಳೂರಿನಲ್ಲೂ ಎನ್ ಎಸ್‌ಜಿ ಘಟಕ ಸ್ಥಾಪಿಸಿ ಎಂದು ಪ್ರಧಾನಿಯನ್ನು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಗಳಾದ ಇನ್ಫೋಸಿಸ್, ವಿಪ್ರೋದಂತಹ ಕಂಪನಿಗಳ ಮೇಲೆ ಉಗ್ರರ ಕಣ್ಣು ಬಿದ್ದಿದ್ದು, ಈ ಕಂಪನಿಗಳ ಮೇಲೆ ದಾಳಿ ನಡೆಸುವುದಾಗಿ ಉಗ್ರರಿಂದ ಬೆದರಿಕೆಯ ಈಮೇಲ್ ಪತ್ರಗಳು ಬಂದಿವೆ. ಇವುಗಳ ನಡುವೆಯ‌ೂ ಸರ್ಕಾರ ಕೂಡ ಭಾರಿ ಭದ್ರತಾ ಕ್ರಮವನ್ನು ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ಮೊರೆಯನ್ನು ಆಲಿಸಿ, ನಮ್ಮ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಯಡಿಯ‌ೂರಪ್ಪ ಮನವಿ ಮಾಡಿಕೊಂಡರು. ಇಂದು ಸಂಜೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಂಗ್ರೆಸ್ ಸಭೆಗೆ ಧರಂ, ಖರ್ಗೆ, ಪ್ರಕಾಶ್ ಗೈರು
ತಾಕತ್ತಿದ್ದರೆ ಮಾನನಷ್ಟ ಹೂಡಲು ಗೌಡರ ಸವಾಲು
ಕಾಂಗ್ರೆಸ್ ಸಭೆಗೆ 'ಕೈ' ಕೊಟ್ಟ ಸಿದ್ದರಾಮಯ್ಯ
ಡೀಸೆಲ್ ದರ ವಿವಾದ: ರಾಷ್ಟ್ರವ್ಯಾಪಿ ಟ್ರಕ್ ಮುಷ್ಕರ
ಐಟಿ ಸಂಸ್ಥೆಗಳಿಗೆ ಈ ಮೇಲ್ ಬೆದರಿಕೆ: ಕಟ್ಟೆಚ್ಚರ
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಉಪಚುನಾವಣೆಯಲ್ಲಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದರೂ ...
ತಾಕತ್ತಿದ್ದರೆ ಮಾನನಷ್ಟ ಹೂಡಲು ಗೌಡರ ಸವಾಲು
ಎನ್ಎಸ್ ಜಿ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಒತ್ತಾಯ
ಮನರಂಜನೆ
ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ
ಮುಂದೆ ಓದಿ|ಮತ್ತಷ್ಟು...