|
| ಕೊಳೆಗೇರಿಗಳ ಕಲ್ಯಾಣಕ್ಕಾಗಿ 'ಉಷಾ' |
| ಬೆಂಗಳೂರು, 6 ಜನವರಿ 2009 ( 16:13 IST ) | |
ನಗರದ ಕೊಳಚೆ ಪ್ರದೇಶದ ಜನರ ಆರೋಗ್ಯ ಸುಧಾರಣೆಗಾಗಿ 'ಉಷಾ' ಯೋಜನೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅನ್ಬುಮಣಿ ರಾಮದಾಸ್ ಹೇಳಿದರು.ನಾಲ್ಕು ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗುತ್ತಿದ್ದು, ಮುಂದಿನ ತಿಂಗಳು ದೇಶದ 429 ನಗರಗಳಲ್ಲಿ ಜಾರಿಗೆ ಬರಲಿದೆ.
ಸುಮಾರು 23 ಕೋಟಿ ಜನ ಸಮುದಾಯವನ್ನು ಇದು ತಲುಪಲಿದೆ ಎಂದರು. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಡೆದ ಶುಶ್ರೂಷ ವಸತಿ ನಿಲಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ದೇಶದಾದ್ಯಂತ ವಿಶೇಷ ಅಭಿಯಾನ ಕೈಗೊಳ್ಳಲಾಗುತ್ತಿದೆ. ಎಲ್ಲಾ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಯಾನ ನಡೆಸಲಾಗುತ್ತಿದೆ. ಅಭಿಯಾನಕ್ಕೆ ಬಜೆಟ್‌ನಲ್ಲಿ 450 ಕೋಟಿ ರೂ. ನೀಡುವಂತೆ ಕೋರಲಾಗಿದೆ ಎಂದರು.
11ನೇ ಪಂಚವಾರ್ಷಿಕ ಯೋಜನೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಲಾಗಿರುವ ಅನುದಾನದಲ್ಲಿ 3.9 ಕೋಟಿ ರೂ.ಗಳನ್ನು ನರ್ಸಿಂಗ್ ತರಬೇತಿಗೆ ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ನರ್ಸಿಂಗ್, ಪ್ಯಾರಾ ಮೆಡಿಕಲ್, ಆಶಾ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|