|
| ಮುಷ್ಕರ ಎದುರಿಸಲು ಕೇಂದ್ರದಿಂದ ಸೂಚನೆ |
| ಬೆಂಗಳೂರು, ಗುರುವಾರ, 8 ಜನವರಿ 2009 ( 12:10 IST ) | |
ಲಾರಿ ಮಾಲೀಕರ ಮುಷ್ಕರದಿಂದ ಯಾವ ಪರಿಸ್ಥಿತಿ ಉದ್ಭವಿಸಿದರೂ ಎದುರಿಸಲು ಸನ್ನಧ್ಧವಾಗಿರುವಂತೆ ರಾಜ್ಯಕ್ಕೆ ಕೇಂದ್ರ ಸೂಚನೆ ನೀಡಿದೆ.ಲಾರಿ ಮಾಲೀಕರ ಬೇಡಿಕೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟವು. ಮಾತುಕತೆ ವಿಫಲವಾಗಿರುವುದರಿಂದ ಕೇಂದ್ರ ಎಲ್ಲ ರಾಜ್ಯಗಳಿಗೆ ಈ ಸೂಚನೆ ರವಾನಿಸಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಮುಷ್ಕರ ನಿಭಾಯಿಸಲು ರಾಜ್ಯಮಟ್ಟದಲ್ಲಿ ಸಾರಿಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆ ಪ್ರತಿದಿನ ಸಭೆ ನಡೆಸಿ ಸ್ಥಿತಿ ಅವಲೋಕಿಸಲಿದೆ. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆಗೆ ಜಿಲ್ಲಾಧಿಕಾರಿ, ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಾರಿಗೆ ಆಯುಕ್ತರ ಕಚೇರಿಯಲ್ಲಿ ದಿನವಿಡೀ ಕಾರ್ಯನಿರ್ವಹಿಸುವ ಮಾಸ್ಟರ್ ಕಂಟ್ರೋಲ್ ರೂಮ್ ಆರಂಭಿಸಲಾಗಿದೆ. ಒಬ್ಬ ಸಹಾಯಕ ಪ್ರಾದೇಶಿಕ ಅಧಿಕಾರಿ, ಒಬ್ಬ ಮೋಟಾರು ವಾಹನ ತನಿಖಾಧಿಕಾರಿ ಒಳಗೊಂಡಿರುವ ಮೂರು ತಂಡಗಳು ಕಾರ್ಯನಿರ್ವಹಿಸಲಿವೆ.
ಮುಷ್ಕರದಲ್ಲಿ ಪಾಲ್ಗೊಳ್ಳದಿರುವ ಸರಕು ಸಾಗಣೆ ವಾಹನ, ಲಾರಿಗಳ ಓಡಾಟಕ್ಕೆ ಮುಷ್ಕರನಿರತರು ತೊಂದರೆ ಉಂಟು ಮಾಡಿದರೆ ಅಥವಾ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಎದುರಾದರೆ ಮಾಸ್ಟರ್ ಕಂಟ್ರೋಲ್ ರೂಮ್, ಕಾರ್ಯಪಡೆಗಳಿಗೆ ಮಾಹಿತಿ ನೀಡಿದರೆ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಸುದೀಪ್ ನಿರ್ದೇಶಿಸಿ ನಟಿಸಿದ 'ವೀರಮದಕರಿ' ಚಿತ್ರದ ಬಗ್ಗೆ ಹೆಚ್ಚು ವಿಶ್ವಾಸವಿಟ್ಟಿದ್ದಾರೆ. ದಿನೇಶ್ ಗಾಂಧಿ ನಿರ್ಮಾಣದ ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಕೊನೆಗೆ ಸ್ವತಃ ಸುದೀಪ್ ವಹಿಸಿಕೊಂಡರು. ಚಿತ್ರದ |
| |
|
|
|
|
|
|
|