|
| ಒಗ್ಗಟ್ಟಿನ ಕೊರತೆಯೇ ಪಕ್ಷದ ಸೋಲಿಗೆ ಕಾರಣ |
| ಬೆಂಗಳೂರು, ಗುರುವಾರ, 8 ಜನವರಿ 2009 ( 15:31 IST ) | |
ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗೂಡಿ ಹೋರಾಟ ಮಾಡದಿರುವುದೇ ಪಕ್ಷದ ಸೋಲಿಗೆ ಕಾರಣ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವ ಅಭಿಪ್ರಾಯಪಟ್ಟಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗೂಡಿಸಿ ಪ್ರಚಾರ ನಡೆಸಿದ್ದರೆ ಉತ್ತಮ ಫಲಿತಾಂಶ ದೊರಕುತಿತ್ತು ಎಂದು ತಿಳಿಸಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶೂನ್ಯ ಸಾಧನೆ ದುರದೃಷ್ಟಕರ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಮ್ಮ ಮುಂದಿನ ಹೆಜ್ಜೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ 'ನಾನು ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ. 40 ವರ್ಷಗಳ ಕಾಲ ಬ್ಲಾಕ್ ಮಟ್ಟದಿಂದ ಎಐಸಿಸಿ ಮಟ್ಟದವರೆಗೆ ಕೆಲಸ ಮಾಡಿದ್ದೇನೆ. ಮುಂದೆಯೂ ಇದೇ ರೀತಿ ಮುಂದುವರಿಯುತ್ತೇನೆ' ಎಂದರು.
'ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ಗಳು ಮಾರಾಟವಾದವು ಎಂದು ಹೇಳಿದ್ದೆ. ವರಿಷ್ಠರಿಗೂ ತಿಳಿಸಿದ್ದೆ. ನನ್ನ ಹೇಳಿಕೆಯ ನಂತರ ಹಲವಾರು ಮುಖಂಡರು ಅದನ್ನು ಬಹಿರಂಗಪಡಿಸಿದ್ದಾರೆ. ಕರ್ನಾಟಕದಲ್ಲಿಯೂ ವಿಧಾನಸಭೆ ಚುನಾವಣೆಯಲ್ಲಿ ಏನೇನು ನಡೆಯಿತು ಎಂಬುದು ನನಗೆ ಗೊತ್ತಿದೆ' ಎಂದರು.
'ಕೇಂದ್ರ ನಾಯಕರಿಗೂ ನನಗೂ ಯಾವುದೇ ಸಂಘರ್ಷವಿಲ್ಲ. ನಾನು ನನ್ನದೇ ಆದ ಸಿದ್ದಾಂತಗಳಡಿ ಬೆಳೆದು ಬಂದವಳಾಗಿದ್ದೇನೆ' ಎಂದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಸುದೀಪ್ ನಿರ್ದೇಶಿಸಿ ನಟಿಸಿದ 'ವೀರಮದಕರಿ' ಚಿತ್ರದ ಬಗ್ಗೆ ಹೆಚ್ಚು ವಿಶ್ವಾಸವಿಟ್ಟಿದ್ದಾರೆ. ದಿನೇಶ್ ಗಾಂಧಿ ನಿರ್ಮಾಣದ ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಕೊನೆಗೆ ಸ್ವತಃ ಸುದೀಪ್ ವಹಿಸಿಕೊಂಡರು. ಚಿತ್ರದ |
| |
|
|
|
|
|
|
|