|
| ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಕಣಕ್ಕೆ? |
| ಬೆಂಗಳೂರು, ಸೋಮವಾರ, 18 ಮೇ 2009 ( 16:23 IST ) | |
ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಟುಂಬದ ಬದ್ಧ ವೈರಿ ತೇಜಸ್ವಿನಿ ರಮೇಶ್ ವಿರುದ್ಧ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದಲ್ಲಿ ಮಂತ್ರಿಗಿರಿಗಾಗಿ ಪೈಪೋಟಿ ನಡೆಸುತ್ತಿದ್ದರೆ ಮತ್ತೊಂದೆಡೆ ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾಗುತ್ತಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರು ಸ್ಪರ್ಧಿಸಲಿದ್ದಾರೆ ಎಂಬು ಮಾತುಗಳು ಕೇಳಿಬರತೊಡಗಿದೆ.
ಕುಮಾರಸ್ವಾಮಿ ಸಂಸತ್‌ಗೆ ಪ್ರವೇಶ ಪಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಕ್ಷೇತ್ರದಿಂದ ಭವಾನಿ ರೇವಣ್ಣ ಅವರನ್ನೇ ಅಖಾಡಕ್ಕಿಳಿಸಲು ಜೆಡಿಎಸ್ ಮುಖಂಡರು ಸಮಾಲೋಚನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆಯಲ್ಲಿ ಪತಿ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ಮಾವ ದೇವೇಗೌಡರ ಗೆಲುವಿಗೆ ಶ್ರಮಿಸಿದ ಭವಾನಿ ವಿಧಾನಸಭೆಗೆ ಪ್ರವೇಶಿಸುವ ತಯಾರಿಯಲ್ಲಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಪತ್ನಿ ಅನಿತಾಕುಮಾರಸ್ವಾಮಿ ಶಾಸಕಿಯಾಗಿದ್ದಾರೆ. ಇದೀಗ ದೇವೇಗೌಡ ಕುಟುಂಬದ ಮತ್ತೊಬ್ಬ ಸೊಸೆ ರಾಜಕೀಯ ಅಖಾಡಕ್ಕೆ ಇಳಿಯುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|