|
| ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ |
| ಬೆಂಗಳೂರು, ಸೋಮವಾರ, 18 ಮೇ 2009 ( 17:55 IST ) | |
2008-09ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪರೀಕ್ಷೆ ಮುಗಿದ 25 ದಿನಗಳಲ್ಲಿ ಪ್ರಕಟಿಸಿತ್ತು. ಈ ಹಿನ್ನಲೆಯಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿಗಳನ್ನು ವಿದ್ಯಾರ್ಥಿಗಳು ಸಲ್ಲಿಸುತ್ತಿದ್ದಾರೆ. ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುವುದನ್ನು ಮುಂದುವರೆಸಿದೆ ಎಂಬ ಆರೋಪ ಕೇಳಿಬರುತ್ತಿದೆ.
ಹಿಂದಿನ ವರ್ಷಕ್ಕಿಂತ ಈ ವರ್ಷ ಮೌಲ್ಯಮಾಪನ ಕಾರ್ಯಕ್ಕೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಾಗಿ ಮಂಡಳಿ ಹೇಳಿತ್ತು. ಆದರೆ ತನ್ನ ಹಿಂದಿನ ಚಾಳಿಯನ್ನು ಮುಂದುವರೆಸಿದೆ. ಚುನಾವಣಾ ಫಲಿತಾಂಶ ಪ್ರಕಟಿಸುವ ಮುನ್ನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ ಮಾದರಿಯಾಗುವ ತರಾತುರಿಯಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಿದ ಫಲವಾಗಿಯೇ ಈ ಬಾರಿ ಸಹಸ್ರಾರು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿವೆ.
ರಾಜ್ಯ ಪ್ರೌಢ ಶಿಕ್ಷಣ ಇಲಾಖೆಯ ನಿರ್ಲಕ್ಷದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಪರಿಸ್ಥಿತಿ ಉಂಟಾಗಿದೆ. ಹೆಚ್ಚು ಅಂಕ ಬರುವ ವಿದಾರ್ಥಿಗಳಿಗೆ ಕಡಿಮೆ ಅಂಕ ಕೊಟ್ಟಿದ್ದಾರೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿಗಳು 300 ರೂ. ಶುಲ್ಕ ಪಾವತಿಸಿ ಉತ್ತರ ಪತ್ರಿಕೆಯ ಛಾಯಾಪ್ರತಿ ಪಡೆದು ನೋಡಿದಾಗ ಶಿಕ್ಷಕರ ನಿರ್ಲಕ್ಷ ಮೆರೆದಿದೆ. ಇಂತಹ ಉದಾಹರಣೆಗಳು ಬೇಕಾದಷ್ಟಿವೆ.
ಈ ಲೋಪವನ್ನು ತೇಜಸ್ ಮಂಡಳಿಯ ಅಧಿಕಾರಿಗಳ ಗಮನಕ್ಕೆ ತಂದಾಗ, ಮಂಡಳಿಯಿಂದ ತಪ್ಪಿಗೆ ಕ್ಷಮೆಯನ್ನೂ ಕೋರಿದೆ. ಅಲ್ಲದೆ ಲೋಪ ಎಸಗಿದ ಶಿಕ್ಷಕರ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಫ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಡಿ.ಎಸ್. ರಾಜಣ್ಣ ಬರವಸೆ ನೀಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|