ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಬೆಂಗಳೂರು, ಸೋಮವಾರ, 18 ಮೇ 2009   ( 19:28 IST )
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೋಮವಾರ ತಮ್ಮ 77ನೇ ವರ್ಷದ ಹುಟ್ಟುಹಬ್ಬವನ್ನು ಯಾವುದೇ ಗೌಜು-ಗದ್ದಲವಿಲ್ಲದೆ ಮನೆಯಲ್ಲೇ ಆಚರಿಸಿಕೊಂಡರು.

ತಮ್ಮ ಹುಟ್ಟು ಹಬ್ಬದಂದು ಪ್ರತಿವರ್ಷ ತಿರುಪತಿಗೆ ತೆರಳಿ ಪೂಜೆ ಸಲ್ಲಿಸುವುದು ದೇವೇಗೌಡರ ವಾಡಿಕೆ. ಆದರೆ ಈ ಬಾರಿ ಯಾಕೋ ಅನಾರೋಗ್ಯದ ನೆಪವೊಡ್ಡಿ, ಅಭಿಮಾನಿಗಳಿಂದ ಹಾಗೂ ಹುಟ್ಟು ಹಬ್ಬದ ಅದ್ದೂರಿಯಿಂದ ದೂರ ಉಳಿದಿದ್ದರು.

ಆದರೂ ಅನಾರೋಗ್ಯದ ನಡುವೆಯೂ ತಮ್ಮ ಕುಟುಂಬದ ಸದಸ್ಯರೊಂದಿಗೆ ಗವಿಪುರಂನಲ್ಲಿರುವ ಶ್ರೀಗವಿಗಂಗಾಧರೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದೆಲ್ಲದರ ನಡುವೆಯೂ ದೇವೇಗೌಡರ ಅಭಿಮಾನಿಗಳು ಅವರ ಹೆಸರಿನಲ್ಲಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಅಲ್ಲದೇ ಅನಾರೋಗ್ಯದಿಂದಾಗಿ ಈ ತಿಂಗಳ 31ರವರೆಗೆ ತಾವು ಎಲ್ಲೂ ಹೋಗಲ್ಲ, ಯಾವುದೇ ಕಾರ್ಯಕ್ರಮದಲ್ಲೂ ಭಾಗವಹಿಸುವುದಿಲ್ಲ ಎಂದು ದೇವೇಗೌಡರು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಕಣಕ್ಕೆ?
ಕಾಂಗ್ರೆಸ್‌‌ಗೆ ನೆರವಾಗದ 'ಜೆಡಿಎಸ್ ಪರೋಕ್ಷ ಬೆಂಬಲ'
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...