ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸರ್ಕಾರ ಅತಂತ್ರಗೊಳಿಸುವ ಪ್ರತಿಪಕ್ಷಗಳ ಹಗಲುಗನಸು
ಬೆಂಗಳೂರು, ಮಂಗಳವಾರ, 19 ಮೇ 2009   ( 16:34 IST )
ರಾಜ್ಯ ಸರ್ಕಾರ ಅತಂತ್ರಗೊಳಿಸುವುದು ಪ್ರತಿಪಕ್ಷಗಳ ಹಗಲುಕನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಹೇಳಿದರು.
ರಾಜ್ಯದ ಜನತೆ ಬಿಜೆಪಿಗೆ ಜನಾದೇಶ ನೀಡಿದ್ದಾರೆ. ಸರ್ಕಾರ ಸುಭದ್ರವಾಗಿದ್ದು, ಉತ್ತಮ ಕೆಲಸ ಮಾಡುತ್ತಿದೆ.

ಸರ್ಕಾರ ಕೈ ಬಲಪಡಿಸುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಒಂದು ವೇಳೆ ಸರ್ಕಾರ ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಮುಂದಾದರೆ, ಜನರ ಕೋಪಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಈ ಹಿಂದೆ ಪಕ್ಷ ಹೇಳಿತ್ತು. ಕುಮಾರಸ್ವಾಮಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿರುವುದನ್ನು ನೋಡಿದರೆ, ಈ ಒಳ ಒಪ್ಪಂದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ದಿ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ, ರಾಜ್ಯದಲ್ಲಿ ಕಾಂಗ್ರೆಸ್ ಎರಡು ಸೀಟು ಕಳೆದುಕೊಳ್ಳಬೇಕಾಯಿತು. ಮುಂದೆಯಾದರೂ ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣಬೇಕು. ಈ ಬಾರಿ ಕಾಂಗ್ರೆಸ್ಸಿನಿಂದ ಹಿರಿಯರು ಗೆದ್ದಿದ್ದು, ಅವರು ದಿಲ್ಲಿಯಲ್ಲಿ ಹಿರಿತನಕ್ಕೆ ತಕ್ಕಂತೆ ವರ್ತಿಸಬೇಕು ಎಂದು ಕಿವಿಮಾತು ಹೇಳಿದರು.
ಬೆಳಗಾವಿ, ಕಾವೇರಿ, ಹೊಗೇನಕಲ್ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯದ ಎಲ್ಲ ಸಂಸದರು ಒಟ್ಟಾಗಿಯೇ ಶ್ರಮಿಸಲಿದ್ದೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಂಸದರು ಈ ವಿಚಾರದಲ್ಲಿ ಸಹಕರಿಸುವ ವಿಶ್ವಾಸವಿದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಾಷಾ ವಿವಾದ: ಕಾಗೇರಿ ವಿರುದ್ಧ ನ್ಯಾಯಾಂಗ ನಿಂದನೆ ದೂರು
ನೆಲ-ಜಲ-ಭಾಷೆಗಾಗಿ ಹೋರಾಡುವೆ:ಬಿ.ವೈ.ರಾಘವೇಂದ್ರ
ಎಚ್‌ಡಿಕೆ, ಕಟೀಲ್, ಧರಂ ಸೇರಿ 9 ಕ್ರಿಮಿನಲ್‌‌ ಸಂಸದರು‍
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...