|
| ಕುಮಾರಸ್ವಾಮಿ ಸಚಿವ ಸ್ಥಾನಕ್ಕೆ ಸಿದ್ದು ತೀವ್ರ ವಿರೋಧ |
| ಬೆಂಗಳೂರು, ಮಂಗಳವಾರ, 19 ಮೇ 2009 ( 16:35 IST ) | |
ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಒಂದೆಡೆ ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಯವರ ಆಸೆ ಭಗ್ನಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಜೆಡಿಎಸ್ ತೊರೆದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರೊಂದಿಗೆ ಶತೃತ್ವ ಕಟ್ಟಿಕೊಂಡಿರುವ ಸಿದ್ದರಾಮಯ್ಯ ಅವರು ಕೇಂದ್ರದಲ್ಲಿ ಜೆಡಿಎಸ್‌ಗೆ ಸಚಿವ ಸ್ಥಾನ ನೀಡುವ ಅಗತ್ಯವಿಲ್ಲ, ಸಚಿವ ಸ್ಥಾನ ಕೊಡುವ ಅನಿವಾರ್ಯತೆಯೂ ಇಲ್ಲ ಎಂದು ಕಾಂಗ್ರೆಸ್ ವರಿಷ್ಠರಿಗೆ ಮನವರಿಕೆ ಮಾಡಿಕೊಡಲು ದೆಹಲಿಗೆ ಹೊರಟಿದ್ದಾರೆ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣೆಗೂ ಮುನ್ನ ತೃತೀಯ ರಂಗದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್ ಫಲಿತಾಂಶ ಪ್ರಕಟವಾದ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಪ್ರಯತ್ನಿಸುತ್ತಿರುವುದು ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣಕ್ಕೆ ನಿದರ್ಶನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ದೇವೇಗೌಡ ಹಾಗೂ ಅವರ ಪುತ್ರ ಕುಮಾರಸ್ವಾಮಿಯವರನ್ನು ನಂಬಲೇಬಾರದು. ಅವರು ರಾಜಕೀಯ ಕುತಂತ್ರಿಗಳು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|