ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹಣಬಲ ಪ್ರದರ್ಶನ ಪ್ರಜಾಪ್ರಭುತ್ವಕ್ಕೆ ಮಾರಕ: ಜೆಡಿಎಸ್
ಬೆಂಗಳೂರು, ಬುಧವಾರ, 20 ಮೇ 2009   ( 12:32 IST )
ಹಣಬಲ ಮತ್ತು ತೋಳ್ಬಲ ಉಪಯೋಗಿಸಿ ಚುನಾವಣೆ ಎದುರಿಸುವಂತಹ ಈಗಿನ ಪರಿಸ್ಥಿತಿ ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಸಂಸದೀಯ ಮಂಡಳೀಯ ಅಧ್ಯಕ್ಷ ಡಿ.ಮಂಜುನಾಥ್ ಹೇಳಿದ್ದಾರೆ.

ವೋಟು ಮತ್ತು ನೋಟು ಪ್ರವೃತ್ತಿಯನ್ನು ಕಳೆದ ವಿಧಾನಸಭಾ ಚುನಾವಣೆಯಿಂದ ಬಿಜೆಪಿ ಹುಟ್ಟುಹಾಕಿದೆ. ಇದರಿಂದ ಸಾಮಾನ್ಯ ಜನ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನು ಹೋಗಲಾಡಿಸಲು ಜನರೇ ಎಚ್ಚೆತ್ತು ಪಾಠ ಕಲಿಸಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಜನತಾದಳ(ಎಸ್)ಪಕ್ಷ ಹೆಚ್ಚಿನ ಸ್ಥಾನಗಳಿಸದಿರಲು ಬಿಜೆಪಿಯವರ ಹಣಬಲ ಮತ್ತು ಬೆದರಿಕೆ ತಂತ್ರವೇ ಕಾರಣವಾಗಿದೆ. ಕೆಲವು ವಲಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತಗಳು ಬಾರದೆ ಇರುವುದೂ ಒಂದು ಕಾರಣವಾಗಿದೆ. ಜೆಡಿಎಸ್ ರೈತರ ಪಕ್ಷ ಇದರ ಸಂಘಟನೆಗೆ ವರಿಷ್ಠರು ಹೆಚ್ಚಿನ ಗಮನ ನೀಡಬೇಕು ಜೊತೆಗೆ ಸೋಲಿನ ಆತ್ಮಾವಲೋಕನ ಮಾಡಲು ಆದಷ್ಟು ಶೀಘ್ರ ಪಕ್ಷದ ಕಾರ್ಯಕಾರಿ ಸಭೆ ಕರೆಯಬೇಕೆಂದು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಒತ್ತಾಯಿಸಿರುವುದಾಗಿ ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚಿತ್ರ ಪ್ರದರ್ಶನ ಸಮಯದಲ್ಲಿ ಬದಲಾವಣೆ
ಐಸಿಸಿಗೆ ಮತ್ತೊಂದು ನೊಟೀಸ್ ನೀಡಲು ಪಾಕ್ ನಿರ್ಧಾರ
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮುಖ್ಯಮಂತ್ರಿ ಹೇಳಿದರೆ ವಿಷ ಕುಡಿಯುವೆ: ಕೃಷ್ಣಯ್ಯ ಶೆಟ್ಟಿ
ಪೇಯಿಂಗ್ ಗೆಸ್ಟ್ ಕಳ್ಳಿ ಪೊಲೀಸರ ಬಲೆಗೆ
ಕುಮಾರಸ್ವಾಮಿ ಸಚಿವ ಸ್ಥಾನಕ್ಕೆ ಸಿದ್ದು ತೀವ್ರ ವಿರೋಧ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...