|
| ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ |
| ಚಿಕ್ಕಮಗಳೂರು, 20 ಮೇ 2009 ( 15:58 IST ) | |
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಫಿ ಬೆಳೆಗಾರರು ಚುನಾವಣೆ ಸಂದರ್ಭದಲ್ಲಿ ನಮ್ಮೊಂದಿಗೆ ನಿರೀಕ್ಷಿತ ಪ್ರಮಾಣದಲ್ಲಿ ಇರಲಿಲ್ಲ. ಇದಕ್ಕೆ ಕಾರಣಗಳು ಹಲವಾರಿವೆ. ಈ ಹಿಂದೆ ಇಂದಿರಾಗಾಂಧಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ದೂರ ನಿಂತ ಬೆಳೆಗಾರರು ಈಗ ಆ ಪಕ್ಷದ ಪರವಾಗಿ ನಿಂತರು ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರದಲ್ಲಿ ಸ್ಥಿರತೆ ಬಯಸಿ ಜನ ನೀಡಿರುವ ತೀರ್ಮಾನ ಸ್ವಾಗತಾರ್ಹ. ಯುಪಿಎ ಸರ್ಕಾರ ರಚಿಸಲು ಅಗತ್ಯ ಇರುವ ಸ್ಥಾನಗಳು ಲಭ್ಯವಾಗಿಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ಫಲಿತಾಂಶ ಬಂದಿದೆ. ದೊಡ್ಡ ರಾಜಕೀಯ ಪಕ್ಷ ಎನ್ನುವ ನಿರ್ಣಯವನ್ನು ಜನ ನೀಡಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಜನ ಮೆಚ್ಚುಗೆ ರೀತಿಯಲ್ಲಿ ಆಡಳಿತ ನೀಡಿರುವುದು ಇದಕ್ಕೆ ಕಾರಣ ಎಂದರು.
ರಾಜ್ಯದಲ್ಲಿ ಬಿಜೆಪಿ ಶೇಕಡ 43 ರಷ್ಟು ಮತಗಳು ಬಂದಿವೆ. ಕಾಂಗ್ರೆಸ್‌ಗೆ ಶೆ. 6 ರಷ್ಟು ಮತ ಕುಸಿದಿದೆ. ಪಕ್ಷದ ಅಭ್ಯರ್ಥಿಗಳು ಸೋತಿರುವಲ್ಲಿಯೂ ಅಂತರ ಕಡಿಮೆ ಇದೆ. ಪಕ್ಷ ಬಲವಾದ ನೆಲೆಯಲ್ಲಿ ನಿಂತಿದೆ ಎನ್ನುವುದು ಲೋಕಸಭಾ ಚುನಾವಣೆ ಸಾಕ್ಷಿಯಾಗಿದೆ. ಫಲಿತಾಂಶ ಪಕ್ಷದ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|