ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅತೀ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದು
ಬೆಂಗಳೂರು, ಬುಧವಾರ, 20 ಮೇ 2009   ( 16:03 IST )
ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಅತಿಯಾದ ಆತ್ಮವಿಶ್ವಾಸ, ಪ್ರಚಾರದ ಕೊರತೆ, ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ವಿಳಂಬವೇ ಮುಖ್ಯ ಕಾರಣ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋನಿಯಾ ಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಮುಖ್ಯಮಂತ್ರಿ ಯಡಿಯ‌ೂರಪ್ಪ ಅವರ ಸರ್ಕಾರ ಕಾರಣವಲ್ಲ ಎಂದರು.

ಕೇಂದ್ರದಲ್ಲಿ ಯುಪಿಎ ಮತ್ತೆ ಸರ್ಕಾರ ರಚನೆ ಮಾಡುತ್ತಿದೆ. ಆದರೆ ರಾಜ್ಯದಲ್ಲಿ ಮಾತ್ರ ನಿರೀಕ್ಷೆ ಮಟ್ಟದಲ್ಲಿ ಸ್ಥಾನಗಳು ಬಂದಿಲ್ಲ. ಇದಕ್ಕೆ ಕಾರಣ ಏನೆಂಬುದುದನ್ನು ನಾಯಕರೆಲ್ಲರು ಕುಳಿತು ಚರ್ಚಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ನಾಯಕರ ಮಧ್ಯೆ ಇರುವ ಭಿನ್ನಾಭಿಪ್ರಾಯವೇ ಸೋಲಿಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿದೆ ಇದು ಸರಿ ಅಲ್ಲ. ಬಿಜೆಪಿ ಸರ್ಕಾರದ ವೈಫಲ್ಯದ ಬಗ್ಗೆ ಜನರಿಗೆ ಮುಟ್ಟಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಆದ್ದರಿಂದಲೇ ಹೆಚ್ಚು ಸ್ಥಾನ ಗಳಿಸಲು ಕಾಂಗ್ರೆಸ್ಸಿಗೆ ಸಾಧ್ಯವಾಗಿಲ್ಲ. ಯಡಿಯ‌ೂರಪ್ಪ ಸುಳ್ಳು ಹೇಳುವುದರಲ್ಲಿ ಬಾರಿ ಚಾಣಾಕ್ಷರು. ಸುಳ್ಳು ಹೇಳಿಯೇ ಜನರನ್ನು ದಾರಿ ತಪ್ಪಿಸಿದ್ದಾರೆ ಎಂದು ಟೀಕಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಕುಮಾರಸ್ವಾಮಿ ಸಚಿವ ಸ್ಥಾನದ ಕನಸು ನನಸಾಗದು
ಹಣಬಲ ಪ್ರದರ್ಶನ ಪ್ರಜಾಪ್ರಭುತ್ವಕ್ಕೆ ಮಾರಕ: ಜೆಡಿಎಸ್
ಚಿತ್ರ ಪ್ರದರ್ಶನ ಸಮಯದಲ್ಲಿ ಬದಲಾವಣೆ
ಐಸಿಸಿಗೆ ಮತ್ತೊಂದು ನೊಟೀಸ್ ನೀಡಲು ಪಾಕ್ ನಿರ್ಧಾರ
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...