ಯಾಹೂ! | ನನ್ನ ಯಾಹೂ! | ಮೇಲ್ | ಚಿತ್ರ
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಏಕದಿನ ಕ್ರಿಕೆಟ್‌ಗೆ ಕುಂಬ್ಳೆ ನಿವೃತ್ತಿ ಘೋಷಣೆ
ಭಾರತೀಯ ಕ್ರಿಕಟ್ ರಂಗಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಸ್ಪಿನ್ ಬೌಲರ್ ಅನಿಲ್ ಕುಂಬ್ಳೆ ಶುಕ್ರವಾರ ಸಾಯಂಕಾಲ ಏಕ ದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಕನ್ನಡದ ಹೆಸರನ್ನು ದೇಶ ವಿದೇಶಗಳಲ್ಲಿ ಮೆರೆಸಿದ ಈ ಕ್ರಿಕೆಟ್ ಕಲಿ, ಬೆಂಗಳೂರಿನ ಕೆಸಿಎಯಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಿವೃತ್ತಿ ಘೋಷಿಸಿದ್ದಾರೆ. ಈ ವೇಳೆ ಅವರ ತಂದೆ ರಾಧಾಕೃಷ್ಣ ಕುಂಬ್ಳೆ ಅವರೂ ಉಪಸ್ಥಿತರಿದ್ದರು.

ಹದಿನೇಳು ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ಯುವ ಕ್ರಿಕೆಟಿಗರಿಗೆ ಮಾರ್ಗದರ್ಶನ ನೀಡುವ ಅಭಿಲಾಷೆ ವ್ಯಕ್ತಪಡಿಸಿದರು.

ಕ್ರಿಕೆಟ್ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಕಂಡಿರುವ ಕುಂಬ್ಳೆ, ಈ ಬಾರಿಯ ವಿಶ್ವಕಪ್ ಪಂದ್ಯದ ಸೋಲಿಗೆ ನಿರಾಸೆ ವ್ಯಕ್ತಪಡಿಸಿದರು.

ಅನಿಲ್ ಕುಂಬ್ಳೆ 1990ರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವೇಳೆಗೆಯೇ ಕ್ರಿಕೆಟ್ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದುವರೆಗೆ ಅವರು ಒಟ್ಟು 337 ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಟೆಸ್ಟ್ ಇನ್ನಿಂಗ್ಸ್ ಒಂದರಲ್ಲಿ ಎಲ್ಲ ಹತ್ತು ವಿಕೆಟ್‌ಗಳನ್ನು ಪಡೆದ ದಾಖಲೆಯೂ ಇವರದ್ದಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಶ್ವಕಪ್: 5ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಬಾಂಗ್ಲಾ
ವಿಶ್ವಕಪ್: ಬಾಂಗ್ಲಾಕ್ಕೆ ಐರ್ಲೆಂಡ್‌ನಿಂದ ಸವಾಲಿನ ಮೊತ್ತ
ವಿಶ್ವಕಪ್: ಶತಕದತ್ತ ಪೊರ್ಟರ್‌ಪಿಲ್ಡ್
ವಿಶ್ವಕಪ್: ಐರ್ಲೆಂಡ್‌‍ನಿಂದ ಉತ್ತಮ ಆಟ ಮುಂದುವರಿಕೆ
ವಿಶ್ವಕಪ್: ಐರ್ಲೆಂಡ್‌‍ನಿಂದ ಉತ್ತಮ ಅಡಿಪಾಯ
ವಿಶ್ವಕಪ್: ಆಫ್ರಿಕಾವನ್ನು ಮಣಿಸಿದ ಕಿವಿಸ್ ಸೆಮಿಫೈನಲ್ ಪ್ರವೇಶ
ಮನರಂಜನೆ
ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು!
ಮುಂದೆ ಓದಿ|ಮತ್ತಷ್ಟು...
ಆರೋಗ್ಯ
AP
 
ಲಿವರ್ ಕ್ಯಾನ್ಸರ್‌ ತಗ್ಗಿಸುವ ಕಾಫಿ
ಹೆಚ್ಚು ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಮಾತನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಆದರೆ ಕಾಫಿ...
ಗರ್ಭಧಾರಣಾ ತೂಕ ಕಳೆಯಲು ವಾಕಿಂಗ್ ಸಹಕಾರಿ
ವಯಸ್ಸು, ಒತ್ತಡ ಗರ್ಭಪಾತಕ್ಕೆ ಕಾರಣ
ಧರ್ಮ
ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ...
ಮುಂದೆ ಓದಿ|ಮತ್ತಷ್ಟು...
Marketplace